Kundapra.com ಕುಂದಾಪ್ರ ಡಾಟ್ ಕಾಂ

ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ 2 ಉಪ ಕಾನೂನು ನೆರವು ಅಭಿರಕ್ಷಕರು, 5 ಸಹಾಯಕ ಕಾನೂನು ನೆರವು ಅಭಿರಕ್ಷಕರ  ಹುದ್ದೆಗಳಿಗೆ ನ್ಯಾಯವಾದಿಗಳಿಂದ ಹಾಗೂ ಆಫೀಸ್ ಅಸಿಸ್ಟೆಂಟ್ 2 ಮತ್ತು ಕಚೇರಿ ಜವಾನ 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತಿ ಅಭ್ಯರ್ಥಿಗಳು ಅಕ್ಟೋಬರ್ 03, 2024ರ ಒಳಗಾಗಿ ಭರ್ತಿಮಾಡಿದ ಅರ್ಜಿಗಳನ್ನು ಉಡುಪಿ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು.

 ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಕಛೇರಿಯನ್ನು ಸಂಪರ್ಕಿಸಬಹುದು ಅಥವಾ https://Udupi.dcourts.gov.in ವೀಕ್ಷಿಸ ಬಹುದಾಗಿದೆ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version