Site icon Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ ಜನತಾ ಪ.ಪೂ ಕಾಲೇಜಿನಲ್ಲಿ ಎನ್‍ಡಿಎ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯ ಉದ್ಘಾಟನೆಯನ್ನು ಎನ್‍ಡಿಎ  ಪರೀಕ್ಷಾ ತರಬೇತುದಾರರು, ಸಂಪನ್ಮೂಲ ವ್ಯಕ್ತಿಗಳು ಆಗಿರುವ  ಅಶ್ವಿನ್ ವಿಗಾಸ್  ಅವರು ನೆರವೇರಿಸಿ, ಸ್ಪರ್ಧಾತ್ಮಕ ಪರೀಕ್ಷೆಯ ಕುರಿತಾಗಿ ಮಾಹಿತಿಯನ್ನು ನೀಡಿದರು.

ಸಮಾರಂಭದಲ್ಲಿ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ನಾಯ್ಕ, ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ಜ್ಞಾನಶೇಖರನ್, ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಸುಜಯ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.

Exit mobile version