ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳು, ಕುಂದಾಪುರ ಇಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ 155ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಅವರು ದೀಪ ಬೆಳಗಿಸಿ ಉದ್ಘಾಟಿಸಿ, ಈ ದಿನದ ಮಹತ್ವವನ್ನು ತಿಳಿಸಿದರು.
ವಿದ್ಯಾರ್ಥಿಗಳಾದ ಶ್ರಾವಣಿ ಎಮ್. ನಾಯ್ಕ್ ಹಾಗೂ ಅವ್ನಿಕಾ ಅವರು ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿಯ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಹಾಗೂ ಸ್ಕೌಟ್ಸ್ ಶಿಕ್ಷಕ ಸುಬ್ರಮಣ್ಯ ಅವರು ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿದರು.
ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಶಾಲಾ ಮಕ್ಕಳು ಹಾಗೂ ಸಂಸ್ಥೆಯ ಬೋಧಕ –ಬೋಧಕೇತರ ಸಿಬ್ಬಂದಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬುಲ್ ಬುಲ್ ಶಿಕ್ಷಕಿ ಪದ್ಮಾವತಿ ಅವರು ಕಾರ್ಯಕ್ರಮವನ್ನು ನಿರೂಪಿಸಿ, ಕಬ್ಸ್ ಶಿಕ್ಷಕಿ ಸುನೀತಾ ಸ್ವಾಗತಿಸಿ, ಬನ್ನಿ ಶಿಕ್ಷಕಿ ಅಶ್ವಿನಿ ವಂದನಾರ್ಪಣೆಗೈದರು. ಸಭಾ ಕಾರ್ಯಕ್ರಮದ ನಂತರ ಸರ್ವಧರ್ಮ ಪ್ರಾರ್ಥನೆ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

