Site icon Kundapra.com ಕುಂದಾಪ್ರ ಡಾಟ್ ಕಾಂ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿಬಿಎಸ್ಇ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ವಿಶ್ವ ವಿನಾಯಕ ಸಿಬಿಎಸ್ಇ ಶಾಲೆಯಲ್ಲಿ ಆ.2ರಂದು ಗಾಂಧಿ ಜಯಂತಿ ಆಚರಿಸಲಾಯಿತು.

ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ್ ಶೆಟ್ಟಿ ಹೆಚ್. ಅವರು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನಗಳನ್ನು ಸಲ್ಲಿಸಿ ಗಾಂಧೀಜಿಯವರ ಸರಳ ಜೀವನ ಹಾಗೂ ತತ್ವಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಯಶಸ್ಸು ಗಳಿಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಶಾಲಾ ಪ್ರಾಂಶುಪಾಲರು ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪುಷ್ಪ ನಮನಗಳನ್ನು ಸಲ್ಲಿಸಿದರು. ಗಾಂಧಿ ಜಯಂತಿಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲಾ ವಠಾರ ಹಾಗೂ ಶಾಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶ್ರಮದಾನ ಕಾರ್ಯಕ್ರಮ ನಡೆಸಿ ಸ್ವಚ್ಛತೆಯನ್ನು ಮಾಡಿ ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡರು.

ಸಭಾ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ವಾರಿಧಿ ಕಾರ್ಯಕ್ರಮ ನಿರೂಪಿಸಿದರು, ಅದ್ನಾನ್ ಸ್ವಾಗತಿಸಿದರು, ಶಿವಾನಿ ವಂದಿಸಿದರು. ಶಿಕ್ಷಕಿಯರಾದ ಸ್ಮಿತಾ ನಾಯ್ಕ್ , ರಜನಿ ಹಾಗೂ ಮಂಜುಶ್ರೀ ಕಾರ್ಯಕ್ರಮ ಸಂಘಟಿಸಿದರು.

Exit mobile version