Site icon Kundapra.com ಕುಂದಾಪ್ರ ಡಾಟ್ ಕಾಂ

ಸ್ವಸ್ಥ ಹಾಗೂ ನಿರ್ಮಲ ಪರಿಸರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

oplus_2

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಕಥೋಲಿಕ್ ಸಭಾ ಉಡುಪಿ ಪ್ರದೇಶ, ಕೊಸೆಸಾಂವ್ ಮಾತೆಯ ಚರ್ಚ್ ಘಟಕ ಗಂಗೊಳ್ಳಿ, ಕಥೋಲಿಕ್ ಸ್ತ್ರೀ ಸಂಘಟನೆ ಗಂಗೊಳ್ಳಿ, ಯುವ ಆಯೋಗ, ಭಾರತೀಯ ಕಥೋಲಿಕ್ ಯುವ ಸಂಚಾಲನ ಗಂಗೊಳ್ಳಿ ಇವರ ಆಶ್ರಯದಲ್ಲಿ ಸ್ವಸ್ಥ ಹಾಗೂ ನಿರ್ಮಲ ಪರಿಸರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಗಂಗೊಳ್ಳಿಯಲ್ಲಿ ಬುಧವಾರ ನಡೆಯಿತು.

ಗಂಗೊಳ್ಳಿಯ ಬಂದರು ಬಸ್ ನಿಲ್ದಾಣದಿಂದ ಗಂಗೊಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದವರೆಗೆ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಕಸಕಡ್ಡಿ ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದ ಸಂಘಟನೆಗಳ ಕಾರ್ಯಕರ್ತರು, ಸ್ವಸ್ಥ ಹಾಗೂ ನಿರ್ಮಲ ಪರಿಸರಕ್ಕೆ ಜನರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಕಥೋಲಿಕ್ ಸಭಾ ಗಂಗೊಳ್ಳಿ ಘಟಕದ ಅಧ್ಯಕ್ಷ ಎಡ್ವರ್ಡ್ ಫೆರ್ನಾಂಡಿಸ್, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಸ್ಥಾಪಕ ಅಧ್ಯಕ್ಷ ಕಿರಣ್ ಕ್ರಾಸ್ತಾ, ಗಂಗೊಳ್ಳಿ ಚರ್ಚಿನ ಧರ್ಮಗುರು ರೆ.ಫಾ. ರೋಶನ್ ಥಾಮಸ್ ಡಿಸೋಜ ಮತ್ತು ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Exit mobile version