Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಮಟ್ಟದ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯ ದ್ವಿತೀಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ  ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.

ವಿದ್ಯಾರ್ಥಿಗಳಾದ ವೈಭವ್, ವಿಶ್ವಾಸ್, ಸಂಕೇತ್, ಅಕ್ಷಯ್ ಬಿಲ್ಲವ ಮತ್ತು ಪ್ರಜ್ವಲ್ ಪೈ ತಂಡವನ್ನು ಪ್ರತಿನಿಧಿಸಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು.

Exit mobile version