Site icon Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ ಪ.ಪೂ.ಕಾಲೇಜು: ವಿಶೇಷ ಚೇತನ ವಿದ್ಯಾರ್ಥಿನಿಗೆ ಅಭಿನಂದನೆ

ಕುಂದಾಪುರ: ಹೆಮ್ಮಾಡಿ ಜನತಾ ಪ.ಪೂ.ಕಾಲೇಜಿನಲ್ಲಿ ಮಕ್ಕಳ ದಿನಾಚರಣೆಯನ್ನು ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಕ್ರೀಡೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಶಸ್ತಿ ವಿಜೇತ ಹೆಮ್ಮಾಡಿ ಜನತಾ ಪ್ರೌಢ ಶಾಲಾ ವಿಶೇಷ ಚೇತನ ವಿದ್ಯಾರ್ಥಿನಿ ಕುಮಾರಿ ರಮ್ಯಾ ಅವರನ್ನು ಅಭಿನಂದಿಸಿ, ಗೌರವಿಸಲಾಯಿತು.

ಜ್ಞಾನ, ಕೌಶಲ್ಯ, ಏಕಾಗೃತೆಗೆ ಸಂಬಂಧಿಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಭೆಯಲ್ಲಿ ಮಂಜುನಾಥ.ಕೆ.ಸ್, ಗೀತಾ ಜೋಷಿ, ಗಿರಿಜಾ, ಜೆಸ್ಸಿ ಡಿಸಿಲ್ವ, ಶ್ರೀಲತಾ.ಕೆ ಉಪಸ್ಥಿತರಿದ್ದರು. ಮಂಜುನಾಥ ಚಂದನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಹರೀಶ್ ಕಾಂಚನ್ ವಂದಿಸಿದರು. ಸಿವಿಲ್ ಕಂಟ್ರಾಕ್ಟರ್ ಸಟ್ವಾಡಿ ಅನಿಲ್ ಕುಮಾರ್ ಕಾರ್ಯಕ್ರಮದ ಪ್ರಾಯೋಜಕತ್ವ ವಹಿಸಿದ್ದರು.

Exit mobile version