Site icon Kundapra.com ಕುಂದಾಪ್ರ ಡಾಟ್ ಕಾಂ

ವಿಧಾನ ಪರಿಷತ್ ಉಪಚುನಾವಣೆ: ಎಸ್. ರಾಜು ಪೂಜಾರಿ ಅವರಿಗೆ ಕಾಂಗ್ರೆಸ್ ಟಿಕೆಟ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
: ವಿಧಾನ ಪರಿಷತ್ ದ.ಕ – ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಎಸ್‌. ರಾಜು ಪೂಜಾರಿಯವರಿಗೆ ಟಿಕೆಟ್ ಲಭಿಸಿದೆ.

ಟಿಕೇಟಿಗಾಗಿ ಹಲವಾರು ಸ್ಪರ್ಧಿಗಳು ಆಕಾಂಕ್ಷಿಗಳಿದ್ದರೂ ಪೈಪೋಟಿ ನಡೆದಿದ್ದರೂ ಕೊನೆಯ ಗಳಿಗೆಯಲ್ಲಿ ಎಸ್. ರಾಜು ಪೂಜಾರಿ ಅವರಿಗೆ ಟಿಕೆಟ್ ಲಭಿಸಿದೆ. ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗುರುತಿಸಿಕೊಂಡಿರುವ ಎಸ್. ರಾಜು ಪೂಜಾರಿಯವರು ವಿದ್ಯಾರ್ಥಿ ದಿಸೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವರು.

ಮರವಂತೆ ಗ್ರಾಮ ಪಂಚಾಯತ್ ಸದಸ್ಯರಾಗಿ ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ, ಉಡುಪಿ ಜಿಲ್ಲಾ ಪಂಚಾಯಿತಿನ ಸದಸ್ಯರಾಗಿ, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾಗಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕರ್ತವ್ಯವನ್ನು ನಿರ್ವಹಿಸಿದರು. ರಾಜಕೀಯ ಸಹಕಾರ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಎಸ್‌.ರಾಜು ಪೂಜಾರಿ ಅವರಿಗೆ ಪರಿಷತ್ತಿನ ಉಪಚುನಾವಣೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟದೆ.

Exit mobile version