ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು, ಆನ್ಗಳ್ಳಿ ಗ್ರಾಮ ಪಂಚಾಯತ್, ಹೇರಿಕುದ್ರು ಫ್ರೆಂಡ್ಸ್, ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆ ಇವರ ಸಹಯೋಗದೊಂದಿಗೆ ಹೇರಿಕುದ್ರು ಮಾನಸ ಮಂದಿರದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ ಶಿಬಿರ ನಡೆಯಿತು.
ಹಲವಾರು ಮಂದಿ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶೇಖರ್ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮಚ್ ಟ್ಟು, ಬಸ್ರೂರು ವೈದ್ಯಾಧಿಕಾರಿ ವಿದ್ಯಾ, ಡಾ. ಮನೋಜ್ ಭಟ್, ಶಂಕರ್ ಶೆಟ್ಟಿ, ಉದಯ್ ಶೆಟ್ಟಿ ಆಜ್ರಿ, ಊರಿನ ಗ್ರಾಮಸ್ಥರಾದ ಗಣಪಯ್ಯ ಶೆಟ್ಟಿ, ಕೊರಗಯ್ಯ ಶೆಟ್ಟಿ ಉಪಸ್ಥಿತರಿದ್ದರು.
ಮಹಾಬಲ ಹೇರಿ ಕುದ್ರು ಕಾರ್ಯಕ್ರಮವನ್ನು ನಿರೂಪಿಸಿ, ಸುನಿಲ್ ಶೆಟ್ಟಿ ಹೇರಿಕುದ್ರು ಧನ್ಯವಾದ ಸಮರ್ಪಿಸಿದರು.

