Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ, ಕಟ್‌ಬೇಲ್ತೂರು ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರುಗಳು ಕಾಂಗ್ರೆಸ್‌ ಸೇರ್ಪಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ಯು. ಸತ್ಯನಾರಾಯಣ್ ರಾವ್ ಹಾಗೂ ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ನಾಗರಾಜ್ ಪುತ್ರನ್ ಅವರು, ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಕಟ್‌ಬೇಲ್ತೂರುವಿನಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರಿಂದ ಧ್ವಜವನ್ನು ಸ್ವೀಕರಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಹೆಮ್ಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ, ಸದಸ್ಯರಾದ ಸುಧಾಕರ್ ಎನ್ ದೇವಾಡಿಗ, ಜಲಜ ಮೊಗವೀರ, ಶಕಿಲಾ, ಗೋಳಿಹೊಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತ ಹೆಗ್ಡೆ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರದೀಪ್‌ ಕುಮಾರ್ ಶೆಟ್ಟಿ ಗುಡಿಬೆಟ್ಟು ಜಿಲ್ಲಾ ಕೆಡಿಪಿ ಸದಸ್ಯ ಪ್ರಸನ್ ಕುಮಾರ್ ಶೆಟ್ಟಿ ಕೆರಾಡಿ ಇದ್ದರು.

Exit mobile version