Site icon Kundapra.com ಕುಂದಾಪ್ರ ಡಾಟ್ ಕಾಂ

ಸಿ.ಬಿ.ಎಸ್‌.ಸಿ. ಕ್ಲಸ್ಟರ್‌ ಅಥ್ಲೆಟಿಕ್ಸ್‌ ಚಾಂಪಿಯ್‌ಶಿಫ್‌: ಕುಂದಾಪುರ ಟ್ರ್ಯಾಕ್‌ ಮತ್ತು ಫೀಲ್ಡ್‌ನ ಆಶಿತ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಪಿ.ಎಸ್‌.ಇ.ಎಂ.ಆರ್‌ ಶಾಲೆ ಮತ್ತು ಪಿಯು ಕಾಲೇಜು ದಾವಣಗೆರೆ ಆಯೋಜಿಸಿದ ಸಿಬಿಎಸ್‌. ಸಿ ಕ್ಲಸ್ಟರ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಫ್‌ ನಲ್ಲಿ ಕುಂದಾಪುರದ ಪ್ರತಿಷ್ಠಿತ ಕ್ರೀಡಾ ತರಬೇತಿ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್‌ ಮತ್ತು ಫೀಲ್ಡ್‌ನ ಅಥ್ಲೀಟ್‌ ಆಶಿತ್‌ ಸಂಜಯ್‌ ಕುಮಾರ್‌ ಬಾಲಕರ ಲಾಂಗ್‌ ಜಂಪ್‌ನಲ್ಲಿ ಚಿನ್ನದ ಪದಕ ಪಡೆದು ಸಿ.ಬಿ.ಎಸ್.ಸಿ ರಾಷ್ಟ್ರೀಯ ಚಾಂಪಿಯನ್‌ಶಿಪ್‌ -2024 ಗೆ ಅರ್ಹತೆ ಪಡೆದಿದ್ದಾರೆ.

ಅವರಿಗೆ ಕುಂದಾಪುರ ಟ್ರ್ಯಾಕ್‌ ಮತ್ತು ಫೀಲ್ಡ್‌ನ ಮುಖ್ಯಸ್ಥರು ಹಾಗೂ ತರಬೇತಿದರರಾದ ಪ್ರಶಾಂತ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version