Kundapra.com ಕುಂದಾಪ್ರ ಡಾಟ್ ಕಾಂ

ರಂಗೋಲಿ ಭಾರತೀಯ ಸಂಸ್ಕೃತಿಯ ಪ್ರತೀಕ: ಸೂರ್ಯನಾರಾಯಣ ಉಪಾಧ್ಯಾಯ

ಕುಂದಾಪುರ: ಮನೆಯ ಎದುರಿಗೆ ಹಾಕುವ ರಂಗೋಲಿ ಮಂಗಳ ಸೂಚಕ. ಇದು ನಮ್ಮ ಸಂಸ್ಕೃತಿಯ ಪ್ರತಿಬಿಂಬವಿದ್ದಂತೆ. ಇಂತಹ ಕಲೆಗಳು ಬದುಕಿನ ಅವಿಭಾಜ್ಯ ಅಂಗವಾಗಿ ಬೆಳೆದಾಗ ಅದು ಕಲಾಕಾರನಿಗೂ ಮುದ ನೀಡುತ್ತದೆ ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಳದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು.

ಕುಂದಪ್ರಭ ಕುಂದಾಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆನೆಗುಡ್ಡೆ ಶ್ರೀ ವಿನಾಯಕ ದೇವಳದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ರಂಗೋಲಿ ಸ್ವರ್ಧೆಯಲ್ಲಿ ಹಾಗೂ ಪ್ರದರ್ಶನವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಬ್ಯಾಂಕ್ ನಿರ್ದೇಶಕ ಡಾ. ಎಚ್, ರಾಮಮೋಹನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಧರ್ಮದರ್ಶಿ ರಮಣ ಉಪಾಧ್ಯಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ದುಗ್ಗೇ ಗೌಡ, ಜನಪದ ಸಂಶೋಧಕ ಕನರಾಡಿ ವಾದಿರಾಜ ಭಟ್, ಕುಂದಾಪುರ ಶ್ರೀ ರಾಮಕ್ಷತ್ರಿಯ ಸಂಘದ ಅಧ್ಯಕ್ಷ ಸುರೇಶ್ ಬೆಟ್ಟಿನ್, . ಕೆ.ಕೆ ರಾಮನ್, ಎಸ್. ಸೋಮಶೇಖರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಕುಂದಪ್ರಭ ಸಂಪಾದಕ ಯು.ಎಸ್. ಶೆಣೈ ಸ್ವಾಗಿತಿಸಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದ ಯೋಜನಾಧಿಕಾರಿ ಅಮರಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಯವಂತ ಪೈ ವಂದಿಸಿದರು.

Exit mobile version