Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ದ.ಕ ಜಿಲ್ಲಾ ವಿಧಾನ ಪರಿಷತ್‌ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ, ಬಿಜೆಪಿಯಿಂದ ಸಿದ್ಧತಾ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ನಾಗೂರು ಶ್ರೀ ಲಲಿತ ಕೃಷ್ಣ ಕಲಾ ಮಂದಿರದ ಸಭಾಂಗಣದಲ್ಲಿ ಬೈಂದೂರು ಮಂಡಲ ಬಿಜೆಪಿ ಪಕ್ಷದ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯಚಟುವಟಿಕೆಗಳ ಹಾಗೂ  ಮುಂದಿನ ಯೋಜನೆಗಳ ಬಗ್ಗೆ ಸಭೆ ನಡೆಸಲಾಯಿತು.

ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಬಿಜೆಪಿ ಎಂಎಲ್‍ಸಿ ಅಭ್ಯರ್ಥಿ ಕಿಶೋರ್  ಕುಮಾರ್ ಪುತ್ತೂರು, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ಜಿಲ್ಲೆಯ ಕಾರ್ಯದರ್ಶಿಗಳಾದ ರಾಘವೇಂದ್ರ ಹಾಗೂ ಪ್ರಿಯದರ್ಶಿನಿ, ಬಿಜೆಪಿ ಉಡುಪಿ ಜಿಲ್ಲೆಯ ಪ್ರಭಾರಿಯಾದ ರಾಜೇಶ್ ಕಾವೇರಿ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಉಮೇಶ್ ಶೆಟ್ಟಿ ಕಲ್ಗದ್ದೆ, ಬೈಂದೂರು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಮಹೇಂದ್ರ ಪೂಜಾರಿ, ಬೈಂದೂರು ಬಿಜೆಪಿ ಮಂಡಲ ಹಾಗೂ ಪಕ್ಷದ ಹಿರಿಯರು ಹಾಗೂ ಮುಖಂಡರು ಭಾಗವಹಿಸಿದ್ದರು.

Exit mobile version