Site icon Kundapra.com ಕುಂದಾಪ್ರ ಡಾಟ್ ಕಾಂ

ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗ್ಗಿ, ಗ್ರಾಮ ಪಂಚಾಯತ್ ಕಾಳಾವರ, ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆ ಇವರ ಸಹಯೋಗದೊಂದಿಗೆ, ಉಪಕೇಂದ್ರ ವಕ್ವಾಡಿ ಇಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ ಶಿಬಿರಗಳನ್ನು ಆಯೋಜಿಸಲಾಯಿತು.

ಹಲವಾರು ಮಂದಿ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶೇಖರ್ ಏನ್‌ ಶೆಟ್ಟಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗ್ಗಿ ವೈದ್ಯಾಧಿಕಾರಿ ಡಾ। ರೋಶನಿ ಶೆಟ್ಟಿ, ನೇತ್ರತಜ್ಞೆ ಡಾ. ರಶ್ಶಿ ಶೆಟ್ಟಿ, ಗ್ರಾಮ ಪಂಚಾಯತ್‌ ಸದಸ್ಯ ರಮೇಶ್‌ ಶೆಟ್ಟಿ, ಶಂಕರ್ ಶೆಟ್ಟಿ, ರಂಜಿತ್‌ ಕುಮಾರ್ ಶೆಟ್ಟಿ, ಪಿ.ಎಚ್‍.ಎಫ್‍ ರವಿರಾಜ್‌ ಶೆಟ್ಟಿ, ಶ್ರೀಕಾಂತ್‌   ಶೆಟ್ಟಿ, ಸತೀಶ್‌ ಶೆಟ್ಟಿ, ಉದಯ್ ಶೆಟ್ಟಿ ಆಜ್ರಿ ಹಾಗೂ ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Exit mobile version