Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಬೆಂಕಿ ತಗಲಿ ಮಹಿಳೆ ಮೃತ್ಯು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಚಹಾ ಮಾಡುತ್ತಿದ್ದ ವೇಳೆ ಗ್ಯಾಸ್ ಒಲೆಯ ಬೆಂಕಿ ಧರಿಸಿದ್ದ ಬಟ್ಟೆಗೆ ತಗಲಿ ಗಂಭೀರ ಗಾಯಗೊಂಡು ಗುಜ್ಜಾಡಿ ಸಮೀಪದ ಕೊಡಪಾಡಿಯ ಫಾತಿಮಾ ಕಾರ್ಡಿನ್ (65) ಸಾವನ್ನಪ್ಪಿದ್ದಾರೆ.

ಫಾತಿಮಾ ಅ. 2ರಂದು ಪುತ್ರನ ಮನೆಲ್ಲಿದ್ದಾಗ ದುರ್ಘಟನೆ ಸಂಭವಿಸಿತ್ತು. ಗಂಭೀರ ಸುಟ್ಟ ಗಾಯಗಳೊಂದಿಗೆ ಅವರನ್ನು ಮರವಂತೆಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಗೆ, ಅನಂತರ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಅ. 5ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅ. 13ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಬರುತ್ತಿರುವಾಗ ಕುಂದಾಪುರದ ಬಳಿ ಮತ್ತೆ ಅಸ್ವಸ್ಥಗೊಂಡರು. ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಹೋದರೂ ಸ್ವಲ್ಪ ಸಮಯದಲ್ಲಿ ಸಾವನ್ನಪ್ಪಿದರು. ಪುತ್ರ ದಿಲೀಪ್ ಕಾರ್ಡಿನ್ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version