ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ ಬೈಂದೂರು ಬ್ಲಾಕ್ ಕಿಸಾನ್ ಘಟಕದ ನೂತನ ಅಧ್ಯಕ್ಷರಾಗಿ ಎಸ್. ವೀರಭದ್ರ ಗಾಣಿಗ ಹಾಲಂಬೇರ್ ಅವರು ಆಯ್ಕೆಯಾಗಿದ್ದಾರೆ.
ಅವರಿಗೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಪೂಜಾರಿ ಹಾಗೂ ಸಮಸ್ತ ಬೈಂದೂರು ಕಾಂಗ್ರೆಸ್ ಪಕ್ಷದ ನಾಯಕರ ಸಮ್ಮುಖದಲ್ಲಿ ಪಕ್ಷದ ನಾಯಕರಾದ ಗೋಪಾಲ ಪೂಜಾರಿ ಅವರಿಂದ ಆದೇಶ ಪ್ರತಿಯನ್ನು ಹಸ್ತಾಂತರಿಸಲಾಯಿತು.

