ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡ ಘಟನೆ ಕೋಟದ ಮಣೂರಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಉಡುಪಿ ಮೂಲದ ಗೌತಮ್ ಪಿ. ಪ್ರಭು (35) ಎಂದು ಗುರುತಿಸಲಾಗಿದೆ.
ಇನ್ನೋವಾ ಕಾರಿನಲ್ಲಿ ಗಂಗೊಳ್ಳಿಯಿಂದ ಉಡುಪಿ ಕಡೆ ಹೋಗುತ್ತಿದ್ದ ವೇಳೆ ಕೋಟ ಮಣೂರು ಸಮೀಪ ಮುಂಬೈಯಿಂದ ಮಂಗಳೂರು ಹೋಗುತ್ತಿದ್ದ ಸರ್ಕಾರಿ ವೋಲ್ವೋ ಬಸ್ ಹಿಂದಿನಿಂದ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿಯಾಗಿದೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ನಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದೆ. ಗಂಭೀರ ಗಾಯಗೊಂಡ ಕಾರು ಗೌತಮ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ಸಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯಗಳಾಗಿಲ್ಲ.
ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.