Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾರ್ಥಿಗಳಲ್ಲಿ ಹೆಚ್.ಐ.ವಿ. ಏಡ್ಸ್ ವಿರುದ್ಧ ಜಾಗೃತಿ ಮತ್ತು ಅರಿವು ಮೂಡಿಸುವಿಕೆ ಕುರಿತು ಬೀದಿನಾಟಕ ಪ್ರದರ್ಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಜಿಲ್ಲಾ ಏಡ್ಸ್  ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ರೆಡ್ ಕ್ರಾಸ್ ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಸಾರ್ವಜನಿಕ ಆಸ್ಪತ್ರೆ, ರೋಟರಿ ಕ್ಲಬ್ ಕುಂದಾಪುರ  ಸನ್ ರೈಸ್ ಇವರ ಸಹಯೋಗದಲ್ಲಿ “ವಿದ್ಯಾರ್ಥಿಗಳಲ್ಲಿ ಹೆಚ್.ಐ.ವಿ. ಏಡ್ಸ್ ವಿರುದ್ಧ ಜಾಗೃತಿ ಮತ್ತು ಅರಿವು ಮೂಡಿಸುವಿಕೆ” ಯು ಕುರಿತು ಬೀದಿನಾಟಕ ಪ್ರದರ್ಶನವು ಬುಧವಾರದಂದು ನಡೆಯಿತು.

ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಇದರ ಅಧ್ಯಕ್ಷ ಜಯಕರ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೇಮಾನಂದ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮದ ಜಿಲ್ಲಾ ಮೇಲ್ವಿಚಾರಕರಾದ ಮಹಾಬಲೇಶ್ವರ, ಆಪ್ತ ಸಮಾಲೋಚಕರಾದ ಪ್ರಶಾಂತ್ ಶೆಟ್ಟಿ, ಆರ್ಟ್ ಕೇಂದ್ರ, ಕುಂದಾಪುರ ತಾಲುಕು ಆಸ್ಪತ್ರೆಯ ರಾಜು,  ಆಪ್ತ ಸಮಾಲೋಚಕರಾದ ನಳೀನಾಕ್ಷಿ, ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಇದರ ಅಧ್ಯಕ್ಷರಾದ ಪ್ರಶಾಂತ್ ಹವಾಲ್ದಾರ್, ಕಾರ್ಯದರ್ಶಿ ಗುರುರಾಜ್ ಕೊತ್ವಾಲ್, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ, ಲಲಿತಾ ಕಲಾ ಸಂಘದ ಸಂಯೋಜಕರಾದ ಶಶಾಂಕ್ ಪಟೇಲ್, ಬೀದಿ ನಾಟಕ ನಿರ್ದೇಶಿಸಿದ ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಭಂಡಾರ್ಕಾರ್ಸ್ ಕಾಲೇಜಿನ ರೇಡಿಯೋ ಕುಂದಾಪುರದ ಕಾರ್ಯಕ್ರಮ ಸಂಯೋಜಕಿ ಜ್ಯೋತಿ ಅಲ್ಸೆ ನಿರ್ವಹಿಸಿದರು.

ಬೀದಿ ನಾಟಕದಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳಾದ ನಿರಂಜನ್, ಧನುಷ್, ಅನಂತಕೃಷ್ಣ, ಸಂಜನಾ, ಸ್ಪೂರ್ತಿ, ಪ್ರಮೀಳಾ, ಮಿಥುನ್, ಸಾತ್ಯಕಿ, ವಿಧಾತಾ ಪಾತ್ರ ನಿರ್ವಹಿಸಿದ್ದರು.

ಈ ಬೀದಿನಾಟಕವು ಕುಂದಾಪುರದ ಶಾಸ್ತ್ರೀ ಸರ್ಕಲ್, ಮಾರುಕಟ್ಟೆ, ಬಸ್ ನಿಲ್ದಾಣ ಮತ್ತು ರೇಲ್ವೆ ನಿಲ್ದಾಣದಲ್ಲಿ ಪ್ರದರ್ಶನಗೊಳ್ಳುತ್ತಿದೆ.

Exit mobile version