ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ವಿಜಯ ಗ್ರಾಮೀಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದಲ್ಲಿ ಕಳೆದ ತಿಂಗಳು ಗಂಗೊಳ್ಳಿಯಲ್ಲಿ 10 ದಿನಗಳ ಕಾಲ ನಡೆಸಲಾದ ಆರಿ ಎಂಬ್ರಾಯ್ಡರಿ ತರಬೇತಿಯ ಫಲಾನುಭವಿಗಳು ಗಂಗೊಳ್ಳಿಯಲ್ಲಿ ಆರಂಭಿಸಿದ ಆಶ್ರಯ ಆರಿ ಎಂಬ್ರಾಯ್ಡರಿ ತರಬೇತಿ ಕೇಂದ್ರ ಎಂಬ ಸ್ವ ಉದ್ಯಮವನ್ನು ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್‌ನ ರಾಘವೇಂದ್ರ ಆಚಾರ್ಯ ಕೆದೂರು ಗುರುವಾರ ಉದ್ಘಾಟಿಸಿ ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಫಲಾನುಭವಿಗಳು ರಚಿಸಿಕೊಂಡಿರುವ ನೂತನ ಸ್ವಸಹಾಯ ಸಂಘಕ್ಕೆ ಚಾಲನೆ ನೀಡಲಾಯಿತು. ತರಬೇತುದಾರೆ ಆರತಿ ರಾಜ್, ತರಬೇತಿ ಕೇಂದ್ರದ ಮುಖ್ಯಸ್ಥರಾದ ರೇಖಾ ಖಾರ್ವಿ ಮತ್ತು ಶಾಂತಿ ಖಾರ್ವಿ ಮತ್ತು ಸದಸ್ಯರು ಉಪಸ್ಥಿತರಿದ್ದರು.

