Site icon Kundapra.com ಕುಂದಾಪ್ರ ಡಾಟ್ ಕಾಂ

ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು: ಗೀತಾ ಆನಂದ್ ಸಿ. ಕುಂದರ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ ಪ್ರತಿಭೆ ಅನಾವರಣಕ್ಕೆ ಕೃಷ್ಣ ವೇಷ ಸ್ಪರ್ಧೆಗಳೇ ಬುನಾದಿ. ಕಾರಂತರಿಗೆ ಮಕ್ಕಳೆಂದರೆ ಅಚ್ಚುಮೆಚ್ಚು ಅವರ ನೆನಪಿನಲ್ಲಿ ನಿರ್ಮಾಣವಾದ ಈ ಸ್ಥಳದಲ್ಲಿ ಮಕ್ಕಳಿಗಾಗಿಯೇ ಹೆಚ್ಚೆಚ್ಚು ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಸಾಂಸ್ಕೃತಿಕ ಚಿಂತಕಿ ಗೀತಾ ಆನಂದ್ ಸಿ. ಕುಂದರ್ ಅವರು ಹೇಳಿದರು.

ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆದ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಕೋಟತಟ್ಟು ಮಹಿಳಾ ಮಂಡಲ ಕೋಟ, ರೋಟರಿ ಕ್ಲಬ್ ಹಂಗಾರಕಟ್ಟೆ – ಸಾಸ್ತಾನ ಸಹಯೋಗದಲ್ಲಿ ಕಾರಂತ ಹುಟ್ಟೂರ ಪುರಸ್ಕಾರದ ವಿಂಶತಿ ಅಂಗವಾಗಿ, ಕಾರಂತ ಜನುಮದಿನದಂದು ಮುದ್ದು ಕೃಷ್ಣ ವೇಷ  ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್, ರೋಟರಿ ಕ್ಲಬ್ ಹಂಗಾರಕಟ್ಟೆ – ಸಾಸ್ತಾನದ ಅಧ್ಯಕ್ಷೆಯಾದ ಲೀಲಾವತಿ ಗಂಗಾಧರ, ಸಾಂಸ್ಕೃತಿಕ ಚಿಂತಕ ವೆಂಕಟೇಶ್ ಭಟ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕ ಸತೀಶ್ ವಡ್ಡರ್ಸೆ ನಿರೂಪಿಸಿ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಸ್ತಾಪಿಸಿದರು.

Exit mobile version