Kundapra.com ಕುಂದಾಪ್ರ ಡಾಟ್ ಕಾಂ

ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ‘ಟೆಕ್‌ಮಂಥನ್ 4.0’ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಂತ್ರಜ್ಞಾನ ಮುಂದುವರಿದ ಈ ಕಾಲಘಟ್ಟದಲ್ಲಿ ಅವುಗಳ ಸದ್ಬಳಕೆಯನ್ನು ಅರಿತು-ಬಳಕೆ ಮಾಡಿದಾಗ ಮಾತ್ರ ಅದು ಒಳಿತು ಎಂಬುದನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ಬೆಳೆಯಬೇಕು ಎಂಬುದಾಗಿ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಹೇಳಿದರು.

ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ವಿಜ್ಞಾನ ವಿಭಾಗ ಆಯೋಜಿಸಿದ ‘ಟೆಕ್‌ಮಂಥನ್ 4.0’ವನ್ನು ಉದ್ಘಾಟಿಸಿ ಮಾತನಾಡಿದರು.     

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಟೆಕ್‌ಮಂಥನ್ ಆಯೋಜಿಸುವಲ್ಲಿ ಶ್ರಮಿಸಿದ ವಿದ್ಯಾರ್ಥಿ ಸಮುದಾಯವನ್ನು ಶ್ಲಾಘಿಸಿದರು. 

ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಶುಭ ಹಾರೈಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕರಾದ ಪ್ರಣಮ್ ಆರ್. ಹಾಗೂ ರಶ್ಮಿ ಗಾವಡಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಅಭಿಷೇಕ್ ಸ್ವಾಗತಿಸಿ, ಸುಜನ ಅತಿಥಿಗಳನ್ನು ಪರಿಚಯಿಸಿ, ಆಕಾಶ್ ವಂದಿಸಿ, ಸಿಂಚನಾ ನಿರೂಪಿಸಿದರು. 

Exit mobile version