Kundapra.com ಕುಂದಾಪ್ರ ಡಾಟ್ ಕಾಂ

ಬೀಜಾಡಿ: ಈಜಲು ತೆರಳಿದ ಇಬ್ಬರು ಯುವಕರು ಸಮುದ್ರಪಾಲು. ಓರ್ವ ಮೃತ, ಓರ್ವ ನಾಪತ್ತೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸ್ನೇಹಿತನ ಕುಟುಂಬದ ಮದುವೆಗೆಂದು ಬೆಂಗಳೂರಿನಿಂದ ಬಂದಿದ್ದ ಯುವಕರು ಈಜಲು ತೆರಳಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರಪಾಲಾಗಿರುವ ಘಟನೆ ಇಂದು ಬೆಳಿಗ್ಗೆ ಬೀಜಾಡಿ ಸಮುದ್ರ ಕಿನಾರೆಯಲ್ಲಿ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ಯುವಕ ಸಂತೋಷ್‌ (24) ಮೃತಪಟ್ಟಿದ್ದು, ಕುಂದಾಪುರದ ಮೂಲಕ ಯುವಕ ಅಜೆಯ್‌ (24) ನಾಪತ್ತೆಯಾಗಿದ್ದಾನೆ.

ಮದುವೆ ಕಾರ್ಯಕ್ರಮಕ್ಕಾಗಿ ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದ ಯುವಕರು ಬೀಜಾಡಿ ಬೀಚ್ ಸಮೀಪದ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು. ಬೆಳಿಗ್ಗೆ ನಾಲ್ವರು ಯುವಕರು ಸಮುದ್ರದಲ್ಲಿ ಈಜಲು ತೆರಳಿದ್ದು ಈ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ಇಬ್ಬರು ಕೊಚ್ಚಿ ಹೋಗಿದ್ದರು. ಮಾಹಿತಿ ತಿಳಿದ ಸ್ಥಳೀಯರು ತಕ್ಷಣ ಸಂತೋಷ್‌ ಎಂಬಾತನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದರಾದರೂ, ಆತನನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದರು.

ನಾಪತ್ತೆಯಾಗಿರುವ ಇನ್ನೋರ್ವ ಯುವಕ ಅಜೇಯನಿಗಾಗಿ ಸಮುದ್ರದಲ್ಲಿ ಸ್ಥಳೀಯ ಮುಳುಗು ತಜ್ಞರು ಹಾಗೂ ಕರಾವಳಿ ಕಾವಲು ಪಡೆಯ ಪೊಲೀಸರಿಂದ ಶೋಧ ನಡೆಸಲಾಗುತ್ತಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸರು ಆಗಮಿಸಿ ಮಾಹಿತಿ ಪಡೆದಿದ್ದಾರೆ.

Exit mobile version