Site icon Kundapra.com ಕುಂದಾಪ್ರ ಡಾಟ್ ಕಾಂ

ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ. ರೂ.3.05 ಲಕ್ಷ ಮೊತ್ತದ ಸೊತ್ತು ವಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ತಾಲೂಕಿನ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಎಂಬಲ್ಲಿರುವ ಸಾಯಿರಾಧಾಟೌನ್‌ಶಿಪ್‌ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಇಟ್ಟುಕೊಂಡು ಮಾರಾಡಕ್ಕೆ ಯತ್ನಿಸುತ್ತಿದ್ದ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್‌ ಜಬ್ಬಾರ್‌ (27) ಎಂಬಾತನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ಗಾಂಜಾ – 2 ಕೆ.ಜಿ 344 ಗ್ರಾಂ ತೂಕ, ಮೌಲ್ಯ ರೂ, 1,87,500, ಸ್ಕೂಟರ್ -1 ಅಂದಾಜು ಮೌಲ್ಯ ರೂ, 1,00,000, ನಗದು ರೂ, 5.810, ಮೊಬೈಲ್ ಪೋನ್ ಅಂದಾಜು ಮೌಲ್ಯ ರೂ. 10,000, ವೆಯಿಂಗ್‌ ಮಿಶನ್‌ 1, ರೂ, 1,000, ಚೂರಿ-1, ರೂ, 300ರನ್ನು ಸೇರಿ ಒಟ್ಟು ರೂ, 3.04,610 ಮೌಲ್ಯದ ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಳಾಗಿದೆ..

ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಪವನ್‌ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾರ್‌, ಪ್ರವೀಣ್‌, ವೆಂಕಟೇಶ್‌, ರಾಜೇಶ್‌, ಯತೀನ್‌ ಕುಮಾರ್‌, ಪ್ರಶಾಂತ್ ಮತ್ತು ಚರಣ್‌ರಾಜ್‌ ರವರನ್ನೊಳಗೊಂಡ ತಂಡವು ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version