Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೇರೂರು ಗ್ರಾಮದ ನಿವಾಸಿ ಸಾಧು (59) ಬುಧವಾರದಂದು ಮಧ್ಯಾಹ್ನ ಗೇರು ಮರದ ಕೊಂಬೆಗೆ ನೈಲಾನ್ ಹಗ್ಗಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅವರಿಗೆ ವಿಪರೀತ ಕಾಲು ನೋವಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಮಾಡಿದರೂ ಕೂಡ ಗುಣಮುಖವಾಗದೇ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version