Site icon Kundapra.com ಕುಂದಾಪ್ರ ಡಾಟ್ ಕಾಂ

ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಕ್ವಾಡಿ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಧ್ವಜಾರೋಹಣ ಮಾಡಿ ಮಾತನಾಡಿ, ನಮ್ಮ ಮಾತೃಭಾಷೆಯ ಮೇಲೆ ನಮಗೆ ಸಂಪೂರ್ಣ ಹಿಡಿತ ಮತ್ತು ಹೆಮ್ಮೆ ಜೊತೆಗೆ ಇತರ ಭಾಷೆಗಳ ಮೇಲೆ ಗೌರವ ಇರಬೇಕು ,ನಮ್ಮ ನಾಡು ನುಡಿಯನ್ನು ಗೌರವಿಸುವುದು ಕೇವಲ ಈ ತಿಂಗಳಿಗೆ ಸೀಮಿತವಾಗದೆ ಪ್ರತಿ ದಿನವೂ ಅದರ ಸವಿಯನ್ನು ಸವಿಯಬೇಕು ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದರು.

ಈ ಸಂದರ್ಭದಲ್ಲಿ  ಶಾಲಾ ಪ್ರಾಂಶುಪಾಲರಾದ ಸುನಿಲ್ ಪ್ಯಾಟ್ರಿಕ್, ಕಾಲೇಜು ಪ್ರಾಂಶುಪಾಲರಾದ ಅವಿನಾಶ್, ಉಪಾನ್ಯಾಸಕರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉಪನ್ಯಾಸಕ ಪ್ರಶಾಂತ್ ನಿರೂಪಿಸಿ, ಉಪನ್ಯಾಸಕಿ ದೀಪಾ ಕಾಮತ್ ವಂದಿಸಿದರು.

Exit mobile version