Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಒಂದು ದಿನದ ಜೀವನ ಮೌಲ್ಯ ಶಿಕ್ಷಣ ಶಿಬಿರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಜೀವನದಲ್ಲಿ  ಅನುಭವಕ್ಕೆ ಬರುವ ಮೌಲ್ಯಗಳು ಜೀವನದ ಆಶಯ ನೆರವೇರಿಸಲು ಪ್ರೇರಣೆಯಾಗಲಿ ಎಂದು ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಕೆ. ದೇವದಾಸ ಕಾಮತ್ ಹೇಳಿದರು.

ಅವರು ನವೆಂಬರ್ 4ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪದವಿಪೂರ್ವ ಮತ್ತು ಪದವಿ ಕಾಲೇಜು, ಶ್ರೀ ಜನಾರ್ದನ ಮಹಾಕಾಳೀ ದೇವಸ್ಥಾನ ಅಂಬಲಪಾಡಿ ಮತ್ತು ಶ್ರೀ ಕುಂದೇಶ್ವರ ದೇವಸ್ಥಾನ ಕುಂದಾಪುರ ಇವರ ಸಹಯೋಗದಲ್ಲಿ “ಒಂದು ದಿನದ ಜೀವನ ಮೌಲ್ಯ ಶಿಕ್ಷಣ ಶಿಬಿರ” ಉದ್ಘಾಟಿಸಿ ಮಾತನಾಡಿದರು. ಮೌಲ್ಯಗಳು ನಮ್ಮ ಗುರಿಯನ್ನು ಮುಟ್ಟಲು ನೆರವಾಗಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್, ಸದಾನಂದ ಚಾತ್ರ, ಅಭಿನಂದನ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸತ್ಯನಾರಾಯಣ ಉಪಸ್ಥಿತರಿದ್ದರು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ವಂದಿಸಿದರು. ಉಪನ್ಯಾಸಕಿ ಹರ್ಷಿತಾ ವಂದಿಸಿದರು.

ನಂತರ ನಡೆದ ಶಿಬಿರದಲ್ಲಿ ಮೊದಲ ಗೋಷ್ಠಿಯಲ್ಲಿ “ಜೀವನ ಯಾತ್ರೆಗೆ ಪ್ರೀತಿಯ ಬೆಳಕು – ಇದೊಂದು ಸುಂದರ ಪಯಣ” ಎಂಬ ವಿಷಯದ ಕುರಿತು ಎನ್.ಆರ್.ದಾಮೋದರ ಶರ್ಮ ಅವರು ಮಾತನಾಡಿದರು.

ಎರಡನೇ ಗೋಷ್ಠಿಯಲ್ಲಿ “ಮಂಕುತಿಮ್ಮನ ಕಗ್ಗದಲ್ಲಿ ಜೀವನ ದರ್ಶನ” ಎಂಬ ವಿಷಯದ ಕುರಿತು ಕೊಂಡಳ್ಳಿ ಪ್ರಭಾಕರ ಶೆಟ್ಟಿ ಮಾತನಾಡಿದರು. ಮೂರನೇ ಗೋಷ್ಠಿಯಲ್ಲಿ ” ಮೌಲ್ಯಯುಕ್ತ ಜೀವನ” ಕುರಿತು ಮುನಿರಾಜ ರಂಜಾಳ ಮಾತನಾಡಿದರು.

Exit mobile version