ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಡ್ಯದಲ್ಲಿ ಡಿ.20ರಿಂದ 3 ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯಾದ್ಯಂತ ತೆರಳುವ ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆಯನ್ನು ಕುಂದಾಪುರದಲ್ಲಿ ಸ್ವಾಗತಿಸಿಕೊಳ್ಳಲಾಯಿತು.

ಈ ವೇಳೆ ಶಾಸಕ ಕಿರಣ್ ಕುಮಾರ್ ಕೊಡ್ಲಿ ಸಾಹಿತ್ಯ ಸಮ್ಮೇಳನ ಅಂಗವಾಗಿ ಜ್ಯೋತಿ ಎಲ್ಲ ಕಡೆಗೆ ಸಂಚಾರ ಮಾಡುತ್ತಿದೆ. ಕನ್ನಡ ಭಾಷೆಯ ಮಹತ್ವದ ದೃಷ್ಟಿಯಿಂದ ಸಮ್ಮೇಳನ ಅವಶ್ಯವಾಗಿದೆ ಎಂದರು.
ಭುವನೇಶ್ವರಿಗೆ ಪುಷ್ಪಮಾಲಾರ್ಚನೆ ಮಾಡಲಾಯಿತು. “ಶಾಸ್ತ್ರಿ ಸರ್ಕಲ್‌ನಿಂದ ಪಾರಿಜಾತ ಮೂಲಕ ಮೆರವಣಿಗೆ ನಡೆಸಲಾಯಿತು. ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಗಾನ, ನೃತ್ಯ ನಡೆಯಿತು.
ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ., ತಹಶೀಲ್ದಾರ್ ಮಲ್ಲಿಕಾರ್ಜುನ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಡಾ|ರವಿ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ , ಕಸಾಪ ಜಿಲ್ಲಾ ಸ್ಥಾಪಕಾಧ್ಯಕ್ಷ ಎ.ಎಸ್.ಎನ್. ಹೆಬ್ಬಾರ್, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಗೌರವ ಕಾರ್ಯದರ್ಶಿ ದಿನಕರ ಆರ್. ಶೆಟ್ಟಿ ಬಸೂರು, ತಾಲೂಕು ಆರೋಗ್ಯಾಧಿಕಾರಿ ಡಾ। ಪ್ರೇಮಾನಂದ್ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಉಮೇಶ ಕೋಟ್ಯಾನ್, ಮೆಸ್ಕಾಂ ಎಇಇ ವಿಜಯ ಕುಮಾರ್ ಶೆಟ್ಟಿ ಉಪತಹಶೀಲ್ದಾರ್ ವಿನಯ್, ಸಮಾಜ ಕಲ್ಯಾಣ ಇಲಾಖೆಯ ರಮೇಶ ಕುಲಾಲ್, ಪುರಸಭೆ ಉಪಾಧ್ಯಕ್ಷೆ ವನಿತಾ ಬಿಲ್ಲವ, ಸದಸ್ಯ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷೆ ಗುಣರತ್ನಾ, ಮಾಜಿ ಸದಸ್ಯೆ ಪುಷ್ಪಾ ಆರ್.ಶೇಟ್, ಮುಖ್ಯಾಧಿಕಾರಿ ಆನಂದ ಜೆ., ಗೋಪಾಡಿ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ, ಸುಧೀರ್ ಕೆ.ಎಸ್., ರೋಹಿಣಿ ಪೈ ಮೊದಲಾದವರು ಇದ್ದರು.
ಬೈಂದೂರು ತಾಲೂಕಿನಲ್ಲಿಯೂ ಸ್ವಾಗತ:
ಉಡುಪಿ ಜಿಲ್ಲೆಯ ರಥಯಾತ್ರೆ ಬೈಂದೂರಿನಿಂದ ಆರಂಭಗೊಂಡಿದ್ದು, ಕನ್ನಡ ರಥಯಾತ್ರೆಯನ್ನು ಬೈಂದೂರು ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿಕೊಳ್ಳಲಾಯಿತು.
ಶಾಸಕ ಗುರುರಾಜ ಗಂಟಿಹೊಳೆ ಅವರು ಕನ್ನಡಡಾಂಬೆಗೆ ಆರತಿ ಬೆಳಗಿ ಮಾತನಾಡಿ, ಮನಸ್ಸುಗಳು ಒಂದಾಗುತ್ತಿದ್ದಾಗ ಕನ್ನಡಪರ ಚಟುವಟಿಕೆ ವೃದ್ಧಿಸುತ್ತದೆ. ಇತರ ಭಾಷೆಯ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಸಲ್ಲದು. ಭಾಷೆಯ ಉಳಿವು ಮತ್ತು ಬೆಳವಣಿಗೆ ಅದರಷ್ಟಕ್ಕೆ ನಡೆಯುತ್ತಿರುತ್ತದೆ. ಆದರೆ ಅಭಿಮಾನ ಸದಾ ನಮ್ಮಲ್ಲಿರಬೇಕು. ಇತ್ತೀಚಿನ ದಿನಗಳಲ್ಲಿನೆಲ, ಜಲ, ಭಾಷೆ, ಅಭಿಮಾನ ಯುವ ಸಮುದಾಯದಲ್ಲಿ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಬೈಂದೂರು ತಹಶೀಲ್ದಾರ್ ಪ್ರದೀಪ್ ಆರ್., ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ತಾಲೂಕು ಆರೋಗ್ಯ ಅಧಿಕಾರಿ ಡಾ। ಪ್ರೇಮಾನಂದ, ತಾ.ಪಂ. ಮುಖ್ಯ ಕಾರ್ಯ ಬೈಂದೂರು ನಿರ್ವಹಣಾಧಿಕಾರಿ ಭಾರತಿ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂರ್ಡಾಕರ್, ಸಾಹಿತಿ ಚಂದ್ರಶೇಖರ ನಾವಡ, ಉಪ ತಹಶೀಲ್ದಾರ್ ಲತಾ ಶೆಟ್ಟಿ ಗಿರಿಜಾ ಮೊಗೇರ, ಸ.ಪ.ಪೂ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಪಿ. ನಾಯ್ಕ ಸ.ಪ್ರ. ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ ಬೈಂದೂರು ಮಾದರಿ ಶಾಲೆಯ ಮುಖ್ಯ ಶಿಕ್ಷಕ ಜನಾರ್ಧನ ದೇವಾಡಿಗ, ಪುಂಡಲೀಕ ನಾಯಕ್, ಜನಪದ ಪರಿಷತ್ ಅಧ್ಯಕ್ಷ ಗೋವಿಂದ ಬಿಲ್ಲವ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಮೆಸ್ಕಾಂ, ಕಂದಾಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕ.ಸಾ.ಪ ಬೈಂದೂರು ಕಾರ್ಯದರ್ಶಿ ಸುಧಾಕರ ಪಿ.ಬೈಂದೂರು ಸ್ವಾಗತಿಸಿದರು. ಕ.ಸಾ.ಪ ಸದಸ್ಯ ಗಣಪತಿ ಹೋಬಳಿದಾರ್ ನಿರೂಪಿಸಿದರು. ಅರುಣ್ ಕುಮಾರ್ ಶಿರೂರು ವಂದಿಸಿದರು. ಬೈಂದೂರು ತಾಲೂಕು ಆಡಳಿತ ಕಚೇರಿಯಿಂದ ಬೈಂದೂರು ಸರ್ಕಲ್ ವರೆಗೆ ಅದ್ದೂರಿಯ ಜಾಥಾ ಮೂಲಕ ಕನ್ನಡ ರಥವನ್ನು ಬೀಳ್ಕೊಡಲಾಯಿತು.