Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಛೇರಿ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ತಾಲೂಕು ಪಂಚಾಯತ್ ಕಛೇರಿಯಲ್ಲಿ ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಛೇರಿಯನ್ನು ಶುಕ್ರವಾರ ಉದ್ಘಾಟನೆಗೊಂಡಿತು.

ಈ ವೇಳೆ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ದಿನೇಶ ಹೆಗ್ಡೆ ಅವರು ಮಾತನಾಡಿ, ರಾಜ್ಯ ಸರಕಾರದ ಐದು ಗ್ಯಾರಂಟಿಗಳಿಂದ ಜನರಿಗೆ ಬಹಳಷ್ಟು ಪ್ರಯೋಜವಾಗಿದೆ. ಇದನ್ನು ಸಹಿಸಿಕೊಳ್ಳಲಾಗದ ವಿರೋಧ ಪಕ್ಷದವರು ಸರಕಾರದ ಗ್ಯಾರಂಟಿಗಳ ಬಗ್ಗೆ ಲೇವಡಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೆ ಸರಕಾರದ ಐದೂ ಗ್ಯಾರಂಟಿಗಳು ನಿರಂತರವಾಗಿ ನಡೆಯುತ್ತದೆ ಎಂದರು.

ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರ ಗ್ಯಾರೆಂಟಿ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಿದೆ. ಯೋಜನೆಯಿಂದ ವಂಚಿತರಾಗಿರುವ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಗ್ಯಾರಂಟಿ ಯೋಜನೆಗಳ ಪ್ರಯೋಜನ ದೊರೆಕಿಸಿಕೊಡಲು ಶ್ರಮಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ ಶೆಟ್ಟಿ, ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ಟೋ, ಕುಂದಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ, ಸದಾನಂದ ಶೆಟ್ಟಿ ಕೆದೂರು, ಶಂಕರ ಕುಂದರ್, ಸಮಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ಸಂತೋಷ ಕುಮಾರ್ ಸ್ವಾಗತಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

ಇದನ್ನೂ ಓದಿ: ಬೈಂದೂರು ತಾಲೂಕು ಪಂಚಾಯತ್‌ ಆವರಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಛೇರಿ ಉದ್ಘಾಟನೆ – https://kundapraa.com/?p=78864 .

Exit mobile version