ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನ.6 ರಂದು ಆನಂದತೀರ್ಥ ವಿದ್ಯಾಲಯ ಪಾಜಕದಲ್ಲಿ ನಡೆದ ಎ.ಐ.ಸಿ.ಎಸ್. ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಉತ್ತಮ ಪ್ರದರ್ಶನವನ್ನು ನೀಡಿರುತ್ತಾರೆ. ಹಿಂದಿ ಕಥಾ ಲೇಖನ ಸ್ಪರ್ಧೆಯಲ್ಲಿ 8ನೇ ತರಗತಿಯ ಸಾನ್ವಿಸಾಗರ್ ಬಿಜಾಪುರದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾಳೆ.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಆಕೆಯನ್ನು ಅಭಿನಂದಿಸುತ್ತಾ, ಸಾನ್ವಿಯು ನಮ್ಮ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲಳಾಗಿದ್ದಾಳೆ. ಅಂದದ ಬರವಣಿಗೆ, ಸ್ವತಂತ್ರ ಕಲ್ಪನಾಶಕ್ತಿ ಹಾಗೂ ವಿಚಾರವಿಮರ್ಶೆಯ ಗುಣಗಳನ್ನು ಹೊಂದಿರುತ್ತಾಳೆ. ಹಿಂದಿಭಾಷೆಯಲ್ಲಿ ಕಥಾಲೇಖನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ ಎಂದರು.

