Kundapra.com ಕುಂದಾಪ್ರ ಡಾಟ್ ಕಾಂ

ಹೊಸ ಪೀಳಿಗೆಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸಲಹೆ ನೀಡುವ ಕಲೆ ಕುರಿತು ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶಿಕ್ಷಕರ ಸಂಘದ ಸಹಯೋಗದಲ್ಲಿ “ಹೊಸ ಪೀಳಿಗೆಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸಲಹೆ ನೀಡುವ ಕಲೆ” ಕುರಿತು ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನಿಟ್ಟೆ  ವಿಶ್ವವಿದ್ಯಾಲಯದ ಎನ್.ಎಮ್.ಎ.ಎಮ್.ಐ.ಟಿ ಇದರ ಆಪ್ತ ಸಮಾಲೋಚಕರೋದ ಅಂಕಿತ್ ಎಸ್.ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಕರು  ಹೇಳುವ ವಿಚಾರಗಳು ಪರಿಣಾಮಕಾರಿಯಾಗಿ ಅವರಿಗೆ ತಲುಪುವ ಮತ್ತು ಅರ್ಥವಾಗುವ ರೀತಿಯಲ್ಲಿ ಇರಬೇಕು. ವಿದ್ಯಾರ್ಥಿ ಸಮುದಾಯದ ಮನಸ್ಥಿತಿಯನ್ನು ಅರಿಯುವ ಪ್ರಯತ್ನವನ್ನು ಮೊದಲು ಮಾಡಬೇಕು. ಅವರು ಆಸಕ್ತಿಯನ್ನು ಅರಿತು ಅದಕ್ಕೆ ತಕ್ಕ ರೀತಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಪಾಠಗಳನ್ನು ಮಾಡಬೇಕು. ಈ ನೆಲೆಯಲ್ಲಿ ಶಿಕ್ಷಕರ ಸಾಕಷ್ಟು ಹೊಸ ನೆಲೆಯಲ್ಲಿ ಯೋಚಿಸಬೇಕು. ಮತ್ತು ಅದೇ ರೀತಿ ತಯಾರಿ ನಡೆಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ವಹಿಸಿದ್ದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ, ಶಿಕ್ಷಕರ ಸಂಘದ ಉಪಾಧ್ಯಕ್ಷ ವಿದ್ಯಾಧರ ಉಪಸ್ಥಿತರಿದ್ದರು.

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಸ್ವಾಗತಿಸಿದರು. ಉಪನ್ಯಾಸಕಿಯರಾದ  ಡಾ. ಸರೋಜ ಎಮ್. ವಂದಿಸಿದರು.  ಸ್ಮಿತಾ ಜಿ.ಎಸ್ ಕಾರ್ಯಕ್ರಮ ನಿರೂಪಿಸಿದರು. ಸುಮಾ ಅತಿಥಿಗಳನ್ನು ಪರಿಚಯಿಸಿದರು.

Exit mobile version