Kundapra.com ಕುಂದಾಪ್ರ ಡಾಟ್ ಕಾಂ

ಅತಿಯಾದ ಮಾತ್ರೆ ಹಾಗೂ ಇಲಿ ಪಾಷಾಣ ಸೇವಿಸಿ ಮಹಿಳೆ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ತಲ್ಲೂರು ಗ್ರಾಮದ ನಿವಾಸಿ ಗೀತಾ (41) ಅವರು ಕುಂದಾಪುರದ ಸಂಗಮ್ ಬಳಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಅತಿಯಾದ ಮಾತ್ರೆ ಹಾಗೂ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ  ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕುಂದಾಪುರ ಪೋಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Exit mobile version