ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಮಣೂರು ಗ್ರಾಮದ ನಿವಾಸಿ ಚಂದ್ರ (63) ಅವರು ಬುಧವಾದಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ ಬಿಪಿ, ಶುಗರ್ ಹಾಗೂ ದಮ್ಮಿನ ಕಾಯಿಲೆಯಿಂದ ಬಳಲುತ್ತಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಟಾರ್ಜ್ ಆಗಿ ಮನೆಗೆ ಬಂದಿದ್ದರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರ ಗಣೇಶ್ ನೀಡಿದ ದೂರಿನಂತೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
