ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕುಂದಾಪುರ ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಡಾ.ನಾಗೇಶ್ ಆಯ್ಕೆಯಾಗಿದ್ದಾರೆ.

ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಶನಿವಾರ ಚುನಾವಣೆ ನಡೆದಿದ್ದು, ಆರೋಗ್ಯ ಇಲಾಖೆಯಿಂದ ಪ್ರತಿನಿಧಿಸಿ ಆಯ್ಕೆಯಾಗಿದ್ದ ಕುಂದಾಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ. ನಾಗೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕಂದಾಯ ಇಲಾಖೆಯ ಕಾಂತರಾಜ, ರಾಜ್ಯ ಪರಿಷತ್ ಸದಸ್ಯರಾಗಿ ಅಬಕಾರಿ ಇಲಾಖೆಯ ರಂಗನಾಥ ಎ ಆಯ್ಕೆಯಾದರು.
► ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾಗಿ ಶೇಖರ ಪೂಜಾರಿ – https://kundapraa.com/?p=79172