Site icon Kundapra.com ಕುಂದಾಪ್ರ ಡಾಟ್ ಕಾಂ

ಕೆ.ಎಸ್.ಟಿ.ಎ ವಾರ್ಷಿಕ ಬಹುಮಾನ: ಅರ್ಜಿ ಅಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ (ಸ್ಟೀಮ್) ವಿಷಯಗಳ ಸಂವಹನಕ್ಕೆ ದಿವ್ಯಾಂಗ ವ್ಯಕ್ತಿಯ ಅತ್ಯುತ್ತಮ ಪ್ರಯತ್ನಗಳನ್ನು ಗುರುತಿಸುವ ಉದ್ದೇಶದಿಂದ ಕೆ.ಎಸ್.ಟಿ.ಎ ವಾರ್ಷಿಕ ಬಹುಮಾನ (ದಿವ್ಯಾಂಗ) ಕ್ಕೆ ಅರ್ಹರಿಂದ ಅರ್ಜಿ ಹಾಗೂ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2025 ರ ಜನವರಿ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. 

Exit mobile version