Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದ ಸಹರಾ ಗಂಗೊಳ್ಳಿ ತಂಡ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ನಡೆದ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಹರಾ ಗಂಗೊಳ್ಳಿ ತಂಡವು ವಾರಿಯರ್ಸ್‌ ಗಂಗೊಳ್ಳಿ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಸಮಾರಂಭದಲ್ಲಿ ಪತ್ರಕರ್ತ ಬಿ. ರಾಘವೇಂದ್ರ ಪೈ ಮತ್ತು ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.

6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್‌ನ ಮನೋಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ್ ಮತ್ತು ಎಸ್.ವಿ. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ ಅವರನ್ನು ಗೌರವಿಸಲಾಯಿತು.

ಸಂಘದ ಸದಸ್ಯರಾದ ಲಿಪ್ಟನ್ ಒಲಿವೇರಾ, ರಾಮ ಪೂಜಾರಿ, ನಿಶಾಕಾಂತ್, ಚೇತನ್ ಆರ್ಕಾಟಿ, ಶಶಿಕಾಂತ್ ಪೂಜಾರಿ, ಕೌಶಿಕ್ ಪೂಜಾರಿ, ಪ್ರಾರ್ಥನಾ ಪೈ, ಶ್ರಾವ್ಯ, ದೀಪ್ತಿ ಮೊದಲಾದವರು ಉಪಸ್ಥಿತರಿದ್ದರು.

Exit mobile version