Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ 2024-25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ತಗ್ಗರ್ಸೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನಾರಾಯಣ ಹೆಗ್ಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಬೈಂದೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯ್ಕ, ಶಾಲೆಯ ಎಸ್, ಡಿ.ಎಂ.ಸಿ. ಸದಸ್ಯರಾದ ಸುಬ್ರಹ್ಮಣ್ಯ ಪೂಜಾರಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಮುತ್ತಯ್ಯ ಪೂಜಾರಿ, ಶಾಲೆ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ಸುಧಾಕರ ಮೊಗವೀರ, ಶಾಲೆಯ ಶಿಕ್ಷಕಿಯಾದ  ಮಾಲತಿ,  ಎನ್ಎಸ್ಎಸ್ ಘಟಕ 1 ಯೋಜನಾಧಿಕಾರಿಗಳಾದ  ನವೀನ್ ಹೆಚ್ ಜೆ ಇನ್ನಿತರರು ಉಪಸ್ಥಿತರಿದ್ದರು.

ಎನ್ಎಸ್ಎಸ್ ಘಟಕ 2 ಯೋಜನಾಧಿಕಾರಿಗಳಾದ ಶ್ರೀಲತಾ ಪೂಜಾರಿ ಪ್ರಾಸ್ತವಿಕ ನುಡಿಗಳಾಡಿದರು. ಶಿಬಿರಾರ್ಥಿಗಳಾದ ಶ್ವೇತಾ ನಿರೂಪಿಸಿ, ಆಶಿತಾ ಸ್ವಾಗತಿಸಿ, ಹರ್ಷ ವಂದಿಸಿದರು.

Exit mobile version