ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮೂಕಾಂಬಿಕಾ ಕ್ರೀಡಾಂಗಣದಲ್ಲಿ ಕಾಲೇಜು ಬಾಲಕ – ಬಾಲಕಿಯರ ರಾಜ್ಯಮಟ್ಟದ ಹೊನಲು ಬೆಳಕಿನ ನೆಟ್ ಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಸಮಾರಂಭ ಶನಿವಾರ ನಡೆಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಮಾಹಾಲಿಂಗ ನಾಯ್ಕ್ ವಹಿಸಿದರು. ದೇವಳದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಂಶುಪಾಲರ ಸಂಘದ ಅಧ್ಯಕ್ಷ ದಿನೇಶ್ ಎಂ. ಕೊಡವೂರು, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಂದ್ರಶೇಖರ್ ಶೆಟ್ಟಿ, ಉಡುಪಿ ಜಿಲ್ಲಾ ಉಪ ನಿರ್ದೇಶಕರಾದ ಮಾರುತಿ, ಉಡುಪಿ ಜಿಲ್ಲಾ ಕ್ರೀಡಾ ಸಂಯೋಜಕರಾದ ದಿನೇಶ್ ಕುಮಾರ್ ಎ., ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವ ಅಧ್ಯಕ್ಷೆ ಜೀವನ್ ಕುಮಾರ್ ಶೆಟ್ಟಿ, ಕ್ರೀಡಾಕೂಟದ ವೀಕ್ಷಕರದ ಮರಿ ಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ರಾಜಾರಾಮ್ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರವಿಶಂಕರ ಹೆಗ್ಡೆ ದೇವಳದ ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯ ಡಾ. ಅತುಲ್ ಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ. ಬಿ., ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ್ ಶೆಟ್ಟಿ ಮೂಡುಬಿದ್ರಿ ದೈಹಿಕ ಶಿಕ್ಷಣ ಉಪನ್ಯಾಸಕ ನವೀನ್ ಹೆಗಡೆ, ಉಡುಪಿ ಜಿಲ್ಲೆಯ ದೈಹಿಕ ಶಿಕ್ಷಣ ಉಪನ್ಯಾಸಕ ಶರತ್ ರಾವ್ , ಕಾಲೇಜಿನ ಉಪನ್ಯಾಸಕ ನಾಗರಾಜ್ ಅಡಿಗ ನೀಲಾವರ ಸಂಗೀತಾ ಪಿ. ಶೆಟ್ಟಿ ವೇದಿಕೆಯಲ್ಲಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ ಸ್ವಾಗತಿಸಿದರು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ನಿರೂಪಿಸಿ, ವಿಜೇತರ ಪಟ್ಟಿಯನ್ನು ವಾಚಿಸಿ ಧನ್ಯವಾದ ಸಲ್ಲಿಸಿದರು.
ರಾಜ್ಯಮಟ್ಟದ ನಟ್ ಬಾಲ್ ಪ್ರಶಸ್ತಿಯನ್ನು ಬಾಲಕರ ವಿಭಾಗದಲ್ಲಿ ಬೆಂಗಳೂರು ಉತ್ತರ ಪ್ರಥಮ, ಮಂಡ್ಯ ದ್ವಿತೀಯ ಹಾಗೂ ಬಾಲಕಿಯರ ವಿಭಾಗ ದಕ್ಷಿಣ ಕನ್ನಡ ಪ್ರಥಮ, ಹಾಸನ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿತು.