Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಜೇನುನೊಣ ಕಡಿತದಿಂದ ಮಹಿಳೆ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು :
ತಾಲೂಕಿನ ಕೆರ್ಗಾಲು ಗ್ರಾಮದ ನಿವಾಸಿ ವೆಂಕು (80) ಅವರು ಜೇನುನೊಣ ಕಡಿತದಿಂದ ಸಾವನ್ನಪ್ಪಿದ್ದಾರೆ.

ಅವರು ತೋಟಕ್ಕೆ ಹೋದ ವೇಳೆ ಜೇನುನೊಣ ದಾಳಿ ನಡೆಸಿತ್ತು. ತೀವ್ರವಾಗಿ ಅಸ್ವಸ್ಥಗೊಂಡ ವೆಂಕು ಅವರನ್ನು ಚಿಕಿತ್ಸೆಗೆಂದು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೈಂದೂರು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version