Site icon Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಅಂತರ್ ಶಾಲಾ ಖೋ ಖೋ ಪಂದ್ಯಾಟ: ಹಟ್ಟಿಯಂಗಡಿ ವಸತಿ ಶಾಲೆಗೆ ರನ್ನರ್- ಅಪ್ ಪ್ರಶಸ್ತಿ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲೆಯ ಕಣಜಾರಿನಲ್ಲಿನ ಲೂರ್ಡ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಅಂತರ್ ಶಾಲಾ ಖೋ ಖೋ ಪಂದ್ಯಾವಳಿಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

14 ಮತ್ತು 17 ವರ್ಷದೊಳಗಿನ ಬಾಲಕರು ತೃತೀಯ ಸ್ಥಾನವನ್ನು ಪಡೆದು ಸಂಭ್ರಮಿಸಿದರು.14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಖುಷಿ ಬಿ. ಟಿ. ‘ಬೆಸ್ಟ್  ಚೇಸರ್’ ಗೌರವಕ್ಕೆ ಪಾತ್ರರಾದರು.

ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅಭಿನಂದನೆಗಳನ್ನು ಸಲ್ಲಿಸುತ್ತಾ” ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ನಮ್ಮ ವಿದ್ಯಾರ್ಥಿಗಳು ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ನಿರ್ವಹಣೆಯೊಂದಿಗೆ ಪ್ರಶಸ್ತಿಗಳನ್ನು ಪಡೆಯುತ್ತಿರುವುದು ಇಡೀ ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ಈ ಸಾಧನೆ ನಮ್ಮ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಾಕ್ಷಿಯಂತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಾಧನೆಗಾಗಿ ಇನ್ನಷ್ಟು ಪ್ರಯತ್ನಿಸಲಿದ್ದೇವೆ “ಎಂದರು.

Exit mobile version