Site icon Kundapra.com ಕುಂದಾಪ್ರ ಡಾಟ್ ಕಾಂ

ಅಂಪಾರು ತಲಕಲ್‌ಗುಡ್ಡೆಯಲ್ಲಿ ಬೈಕ್‌ ಸ್ಕಿಡ್‌ ಆಗಿ ಸವಾರ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಅಂಪಾರು ಗ್ರಾಮದ ಹೆಬ್ರಿಯ ನೆಲ್ಲಿಕಟ್ಟೆಯ ನಿವಾಸಿ ಮನೋಜ್‌ (48) ಅವರು ತಲಕಲ್‌ಗುಡ್ಡೆಯ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ. 26ರಂದು ಮೃತಪಟ್ಟರು.

ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version