ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಷ್ಟೀಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗೆ ನ.26 ರಂದು ಬಿ. ಆರ್ ಸಿ. ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಅಮೂಲ್ಯ ಇಂಗ್ಲಿಷ್ ಪ್ರಬಂಧ ತಾಲೂಕು ಮಟ್ಟದಲ್ಲಿ ಪ್ರಥಮ, ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಗತಿ ಮತ್ತು ಆದಿತ್ಯ ಬಿ. ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳಿಗೆ ಆಡಳಿತಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿದ್ದಾರೆ.