Site icon Kundapra.com ಕುಂದಾಪ್ರ ಡಾಟ್ ಕಾಂ

ಗೋವಾ ಬಂಟರ ಸಂಘ: ರಜತ ಸಂಭ್ರಮದ ಪೂರ್ವಭಾವಿ ಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಗೋವಾ ಬಂಟರ ಸಂಘದ ವಾರ್ಷಿಕ ಮಹಾಸಭೆ ಮತ್ತು ರಜತ ಮಹೋತ್ಸವದ ಕಾರ್ಯಕ್ರಮ  ಜ.19ರ ಭಾನುವಾರ  ಹೋಟೆಲ್ ಲಕ್ಷ್ಮಿ ಎಂಪೈರ್ ಮಡಗಾಂವ್‌ನಲ್ಲಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯನ್ನು ಸಂಘದ ಅಧ್ಯಕ್ಷರಾದ ಕಾವಡಿ ಸದಾಶಿವ ಶೆಟ್ಟಿ ಅವರ ನೇತೃತ್ವದಲ್ಲಿ ನ.30ರ ಶನಿವಾರ ಸಂಜೆ ಹೋಟೆಲ್  ಸಾಗರ್ ವಿವ್ ಕನ್ಸೋಲಿನ್ ಪಣಜಿಯಲ್ಲಿ ಪದಾಧಿಕಾರಿಗಳ ಸಭೆ ನಡೆಯಿತು.

ಸಭೆಯಲ್ಲಿ ರಜತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.

ಗೋವಾ ಬಂಟರ ಸಂಘದ ಮಾಜಿ  ಅಧ್ಯಕ್ಷರಾದ ಶಶಿ ಶೆಟ್ಟಿ ಬೊಮ್ಮರ ಬೆಟ್ಟು, ಪ್ರಧಾನ ಕಾರ್ಯದರ್ಶಿ ಸುನಿಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ವಿಜಯೇಂದ್ರ ಶೆಟ್ಟಿ ಪರ್ಕಳ, ಜಗದೀಶ್ ಶೆಟ್ಟಿ ಪಳ್ಳಿ, ಜೊತೆ ಕಾರ್ಯದರ್ಶಿ ರಾಘವ ಶೆಟ್ಟಿ ಕೊಡ್ಲಾಡಿ, ಹರ್ಷ ಶೆಟ್ಟಿ ಕಾವಡಿ, ಕರುಣಾಕರ ಶೆಟ್ಟಿ ಪೆರ್ಡೂರು ಹಾಗೂ ಕುಂದಾಪುರ ಯುವ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ  ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Exit mobile version