ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಸೂರು ಜನತಾ ಕಾಲೊನಿಗೆ ಹೋಗುವ ಅಡ್ಡ ರಸ್ತೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಸೈಕಲ್ ಸವಾರ ಭಾನುವಾರ ಮೃತಪಟ್ಟ ಘಟನೆ ನಡೆದಿದೆ.
ಕಂಡ್ಲೂರಿನಿಂದ ಕುಂದಾಪುರದ ಕಡೆಗೆ ಸಾಗುತ್ತಿದ್ದ ಬೈಕ್ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಮಂಜುನಾಥ್ (54) ಗಂಭೀರವಾಗಿ ಗಾಯಗೊಂಡಿದ್ದರು.
ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ವೇಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

