Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಸ್ತು ಪ್ರದರ್ಶನ. ವಿವಿಧ ಮಳಿಗೆಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುತ್ತಿರುವ ಬ್ರಹತ್ ವಿಜ್ಞಾನ ವಾಣಿಜ್ಯ ಕಲೆ ಪರಿಸರ ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಕೈಗಾರಿಕಾ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರ, ವಿದ್ಯಾರ್ಥಿಗಳ ವ್ಯಾಪಾರ ಮಳಿಗೆ ಮತ್ತು ಗ್ರಂಥಾಲಯದ ಕಲಾ ಗ್ಯಾಲರಿಯನ್ನು ಗಂಗೊಳ್ಳಿ ಉದ್ಯಮಿಯಾದ ದತ್ತಾನಂದ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಪ್ರಭಾಕರ, ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ  ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ಉಪಸ್ಥಿತರಿದ್ದರು.

Exit mobile version