Site icon Kundapra.com ಕುಂದಾಪ್ರ ಡಾಟ್ ಕಾಂ

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನ: ರಾಜ್ಯದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ,ಡಿ.10:
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಡಿ.10ರ ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು. ಡಿಸೆಂಬರ್ 11 ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.

ಖಾಸಗಿ ಶಾಲೆಗಳಿಗೂ ರಜೆ
ಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Exit mobile version