Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ವಾರ್ಷಿಕ ಬಹುಮಾನ ವಿತರಣಾ ಸಮಾರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕುಂದಾಪುರದ ಪಸಿದ್ಧ ವಕೀಲರಾದ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಅವರು  ಮುಖ್ಯ ಅಥಿತಿಗಳಾಗಿ ಆಗಮಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಸೂಕ್ತ ಸಲಹೆ ನೀಡಿ, ವಿವಿಧ ಸ್ಪರ್ಧೆಗಳಲ್ಲಿ ವೀಜೆತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

 ಇನ್ನೋರ್ವ ಮುಖ್ಯ ಅಥಿತಿ ಮಂಜುನಾಥ ಆಸ್ಪತ್ರೆ, ಕುಂದಾಪುರ ಇಲ್ಲಿಯ ನೇತ್ರ ತಜ್ಞರಾದ ಡಾ. ಅನ್ವತಾ ಶೆಟ್ಟಿ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನದ ಗುರಿಯನ್ನು ರೂಪಿಸಿಕೊಂಡಿರಬೇಕು ಎಂದು ತಿಳಿಸಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ,  ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿ’ಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜಾ ಹಾಗೂ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀನಾರಾಯಣ ಶೆಣೈ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.      

ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸರ್ವರನ್ನು ಸ್ವಾಗತಿಸಿದರು. ಮಹಮದ್ ಸುವೇದ್ ಹಾಗೂ ಅಮೂಲ್ಯ ಶೇಟ್ ಅವರು ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಮಂಜುಶ್ರೀ ನಿರೂಪಣೆಗೈದು, ರಕ್ಷಿತ್ ಭೂ ಶೆಟ್ಟಿ ವಂದನಾರ್ಪಣೆ ಗೈದರು.                                                                                                                                                

Exit mobile version