Site icon Kundapra.com ಕುಂದಾಪ್ರ ಡಾಟ್ ಕಾಂ

ಕೇಂದ್ರ ಸರ್ಕಾರದಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 95,000 ಉಚಿತ ಶಾಲಾ ಬ್ಯಾಗ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ  ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ 1ನೇ ತರಗತಿಯಿಂದ 7ನೇ ತರಗತಿವರೆಗಿನ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ 95,000 ಶಾಲಾ ಬ್ಯಾಗ್‍ಗಳನ್ನು ನೀಡಿದರು.

ಅವರು ಶಿವಮೊಗ್ಗ ನಗರದ ದುರ್ಗಿಗುಡಿ ಅಲ್ಲಿರುವ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಗ್ ವಿತರಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ 8 ರಿಂದ 10 ನೇ ತರಗತಿಯ ಸರ್ಕಾರಿ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಶಾಲಾ ಬ್ಯಾಗ್ ವಿತರಣೆ ಮಾಡುವ ಗುರಿಯನ್ನು ಹೊಂದಿದ್ದು,  ಅದರ ಜೊತೆಗೆ ಉಚಿತವಾಗಿ ಸ್ವೆಟರ್, ನೋಟ್ ಪುಸ್ತಕ ಹಾಗೂ ಇನ್ನಿತರೆ ಕಲಿಕಾ ಉಪಕರಣಗಳನ್ನು  ರಾಷ್ಟ್ರೀಯ ಸಾಕ್ಷರತಾ ಮಿಷನ್ ವತಿಯಿಂದ ನೀಡಲಾಗುವುದೆಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.

Exit mobile version