Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 36ನೇ ವಾರ್ಷಿಕೋತ್ಸವ       

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 36ನೇ ವಾರ್ಷಿಕೋತ್ಸವ ಸಮಾರಂಭವು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ್ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಛಲ ಮತ್ತು ಗುರಿಯಿಂದ ಮುನ್ನಡೆದು ಯಶಸ್ಸು ಸಾಧಿಸುವ ಬಗ್ಗೆ ತಿಳಿಸಿ,  ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಧತ್ತಿ ನಿಧಿ ಬಹುಮಾನಗಳನ್ನು ವಿತರಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಸಂದೀಪನ್ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷರಾಗಿರುವ ಸಂಜೀತ್ ಪ್ರಕಾಶ್ ರಾವ್ ಅವರು ಮಾತನಾಡಿ, ಪೋಷಕರು ತಮ್ಮ ಮಕ್ಕಳೊಂದಿಗೆ ದಿನದ ಸ್ವಲ್ಪ ಸಮಯವನ್ನಾದರೂ ಮೀಸಲಿಟ್ಟು ಅವರ ಗುರಿ ಸಾಧನೆಗೆ ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು. ಇವರೂ ಕೂಡ ಅಧಿಕ ಅಂಕ ಗಳಿಸಿದವರಿಗೆ  ದತ್ತಿ ನಿಧಿ ಬಹುಮಾನಗಳನ್ನು ವಿತರಿಸಿದರು.

ಆಡಳಿತ ಮಂಡಳಿಯ  ಖಜಾಂಚಿ ಅವರಾದ ಕೆ. ಲಕ್ಷ್ಮೀ ನಾರಾಯಣ ಶೆಣೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಾಥಮಿಕ ಶಾಲಾ ಮುಖ್ಯಸ್ಥೆ ರೇಷ್ಮಾ ಡಿಸೋಜಾ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ  ಕೃಷ್ಣ ಅಡಿಗ ವಾರ್ಷಿಕ ವರದಿಯನ್ನು ವಾಚಿಸಿದರು. ಶಾಲಾ ವಿದ್ಯಾರ್ಥಿ ಮುಖಂಡ ವಿಘ್ನೇಶ್ ಶಾಲಾ ಮಂತ್ರಿ ಮಂಡಲದ ವರದಿಯನ್ನು ವಾಚಿಸಿದರು. ವಿದ್ಯಾರ್ಥಿನಿ  ಆಕಾಂಕ್ಷ ಎಸ್. ಪೈ ಕಾರ್ಯಕ್ರಮವನ್ನು ನಿರೂಪಿಸಿದರು. ಶರ್ವಾಣಿ ಹಾಗೂ ಮಹಮದ್ ಹಿಬಾನ್ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಸಮೃದ್ಧಿ ನಾಯಕ್ ವಂದಾನಾರ್ಪಣೆ ಗೈದರು.

ಸಭಾ ಕಾರ್ಯಕ್ರಮದ ಬಳಿಕ ನಡೆದ ನೃತ್ಯ, ನಾಟಕ  ಹಾಗೂ ಯಕ್ಷಗಾನ ಪ್ರದರ್ಶನವು ಪ್ರೇಕ್ಷಕರ ಮನಸೂರೆಗೊಳಿಸಿತು.

Exit mobile version