Site icon Kundapra.com ಕುಂದಾಪ್ರ ಡಾಟ್ ಕಾಂ

ಸವಿ-ನುಡಿ ಹಬ್ಬದಲ್ಲಿ ಸಾಹಿತಿ ಜಯಂತ ಕಾಯ್ಕಿಣಿಗೆ ಸನ್ಮಾನ

ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಕುಂದಪ್ರಭ ಕುಂದಾಪುರ, ಸಾಹಿತ್ಯ ವೇದಿಕೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಯು.ಶೇಷಗರಿ ಶೆಣೈ ಸ್ಮರಣಾರ್ಥ ಆಯೋಜಿಸಿದ್ದ ಸವಿ-ನುಡಿ ಹಬ್ಬ 2015ಕಾರ್ಯಕ್ರಮದಲ್ಲಿ ಸಾಹಿತಿ ಜಯಂತ ಕಾಯ್ಕಿಣಿ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.

ಗಂಗೊಳ್ಳಿ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉದ್ಯಮಿಗಳಾದ ದತ್ತಾನಂದ ಗಂಗೊಳ್ಳಿ, ಪ್ರಶಾಂತ ಕುಂದರ್ ಕೋಟ, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಕುಂದಪ್ರಭ ಸಂಪದಕ ಯು.ಎಸ್.ಶೆಣೈ, ಕಾಲೇಜಿನ ಪ್ರಾಂಶುಪಾಲ ಆರ್.ಎನ್.ರೇವಣ್‌ಕರ್, ಎಸ್.ವಿ.ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಕವಿತಾ ಎಂ.ಸಿ., ಪ್ರೌಢಶಾಲೆಯ ಉಪಪ್ರಾಂಶುಪಾಲ ವಾಮನದಾಸ ಭಟ್, ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದರು.

Exit mobile version