Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯ ಮಟ್ಟದ ಟೆನ್ನಿಸ್‌ ವಾಲಿಬಾಲ್‌ನಲ್ಲಿ ಸಮೀಕ್ಷಾ ಮತ್ತು ಅದಿತಿ ಪ್ರಥಮ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಶಾಲಾ ಶಿಕ್ಷಣ ಇಲಾಖೆಯ ( ಪದವಿ ಪೂರ್ವ ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ 2024 – 2025 ಕೊಪ್ಪಳದಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್‌ನಲ್ಲಿ ಉಡುಪಿ ಜಿಲ್ಲೆಯಿಂದ ಸ್ಪರ್ಧಿಸಿದ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಸಮೀಕ್ಷಾ ಮತ್ತು ಅದಿತಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಕಾಲೇಜಿನ ಗರಿಮೆಯನ್ನು ರಾಜ್ಯ ಮಟ್ಟದಲ್ಲಿ ಪಸರಿಸಿದ್ದಾರೆ. 

ವಿದ್ಯಾರ್ಥಿನಿಯರಿಗೆ  ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version